ಯೆಹೋಶುವ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ಯೆಹೋಶುವನಿಗೆ - ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ ಎನ್ನಲು ಅವನು ಅದನ್ನು ಚಾಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು. ಅಧ್ಯಾಯವನ್ನು ನೋಡಿ |