Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಚಾಚಿದ ಕೂಡಲೆ ಹೊಂಚುಗಾರರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ನಗರದೊಳಕ್ಕೆ ನುಗ್ಗಿ ಒಡನೆ ಬೆಂಕಿ ಹೊತ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಕೈಯನ್ನು ಚಾಚಿದ ಕೂಡಲೆ ಹೊಂಚಿ ನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಹೊಂಚುಗಾರರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಪಟ್ಟಣದಲ್ಲಿ ಪ್ರವೇಶಿಸಿ, ಸೆರೆಹಿಡಿದು ಕೂಡಲೆ ಅದಕ್ಕೆ ಬೆಂಕಿಯನ್ನು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:19
5 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.


ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.


ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು


ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.


ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು