Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡು, ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ದೇಶ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ. ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:2
27 ತಿಳಿವುಗಳ ಹೋಲಿಕೆ  

ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.


ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.


ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.


ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.


ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.


ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.


ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.


ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.


ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.


ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ


ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.


ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.


ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು


ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು