Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:20
14 ತಿಳಿವುಗಳ ಹೋಲಿಕೆ  

ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.


“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.


ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.


ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”


ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.


ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.


ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.


ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.


ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು.


ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು