ಯೆಹೋಶುವ 8:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ. ಅಧ್ಯಾಯವನ್ನು ನೋಡಿ |