ಯೆಹೋಶುವ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾವೂ ಅವರೂ ಪಟ್ಟಣಕ್ಕೆ ದೂರವಾದ ಮೇಲೆ ನೀವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು. ಅಧ್ಯಾಯವನ್ನು ನೋಡಿ |