ಯೆಹೋಶುವ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೊರ್ದನ್ ಹೊಳೆಯ ಆಚೆ ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ ಹಿತ್ತಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು. ಅಧ್ಯಾಯವನ್ನು ನೋಡಿ |
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.