Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಮಾಡಿದ್ದೆಲ್ಲವನ್ನೂ ಕೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:10
13 ತಿಳಿವುಗಳ ಹೋಲಿಕೆ  

ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.


ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.


ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.


ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.


‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.


ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.


ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು