ಯೆಹೋಶುವ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ನಮ್ಮನ್ನು ಇಲ್ಲಿಗೆ ಕಳಿಸುತ್ತಾ, ‘ನೀವು ಪ್ರಯಾಣಕ್ಕಾಗಿ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಯೇಲರನ್ನು ಎದುರುಗೊಳ್ಳಿ - ನಾವು ನಿಮ್ಮ ಸೇವಕರು, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಿ ಎಂದು ವಿನಂತಿಸಿ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು - ನಾವು ನಿಮ್ಮ ಸೇವಕರು; ನೀವು ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂಬದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿಮಾಡಿ, ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು. ಅಧ್ಯಾಯವನ್ನು ನೋಡಿ |