Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:15
10 ತಿಳಿವುಗಳ ಹೋಲಿಕೆ  

ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.


ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.


ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.


ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.


“ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು