Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದೂ ತಮ್ಮ ಮಧ್ಯೆ ವಾಸಿಸುವವರೆಂದೂ ಇಸ್ರಯೇಲರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಡಂಬಡಿಕೆಯಾದ ಮೂರು ದಿನಗಳ ಮೇಲೆ ಅವರು ಹತ್ತಿರದವರೂ ತಮ್ಮ ಮಧ್ಯದಲ್ಲಿಯೇ ವಾಸಿಸುವವರೂ ಆಗಿದ್ದಾರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂರು ದಿನಗಳ ತರುವಾಯ ಆ ಜನರು ತಮ್ಮ ಪಾಳೆಯದ ಸಮೀಪ ವಾಸಿಸುವವರು ಎಂಬುದು ಇಸ್ರೇಲರಿಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ, ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ, ತಮ್ಮಲ್ಲಿ ಇರುವವರೆಂದೂ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:16
5 ತಿಳಿವುಗಳ ಹೋಲಿಕೆ  

ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.


ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.


ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.


ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು