Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೋಶುವನಿಗೂ ಇಸ್ರಯೇಲರಿಗೂ ವಿರುದ್ಧ ಯುದ್ಧಮಾಡಬೇಕೆಂದು ಒಮ್ಮನಸ್ಸಿನಿಂದ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವದಕ್ಕೆ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅವರು ಯೆಹೋಶುವನಿಗೂ ಇಸ್ರಾಯೇಲರಿಗೂ ವಿರುದ್ಧ ಯುದ್ಧಮಾಡುವುದಕ್ಕೆ ಒಟ್ಟಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:2
15 ತಿಳಿವುಗಳ ಹೋಲಿಕೆ  

ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.


“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,


ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು