Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರಿಕೋವಿನವರನ್ನೂ ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯನ್ನು ಗಿಬ್ಯೋನಿನ ನಿವಾಸಿಗಳು ಕೇಳಿ ಅವರೂ ಒಂದು ಯುಕ್ತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:3
17 ತಿಳಿವುಗಳ ಹೋಲಿಕೆ  

ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.


ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,


ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?


ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.


ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.


ಗಿಬ್ಯೋನ್, ರಾಮಾ, ಬೇರೋತ್,


ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.


ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು,


ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು