ಯೆಹೋಶುವ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು. ಅಧ್ಯಾಯವನ್ನು ನೋಡಿ |