ಯೋನನು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು. ಅಧ್ಯಾಯವನ್ನು ನೋಡಿ |