Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:6
18 ತಿಳಿವುಗಳ ಹೋಲಿಕೆ  

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”


ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು