Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:7
18 ತಿಳಿವುಗಳ ಹೋಲಿಕೆ  

ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.


ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;


ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.


ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು