ಯೋನನು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪರ್ವತಗಳ ಬುಡದ ತನಕ ಇಳಿದೆನು, ಭೂಲೋಕದ ಅಗುಳಿಗಳು ಎಂದಿಗೂ ತೆಗೆಯದ ಹಾಗೆ ನನ್ನ ಹಿಂದೆ ಹಾಕಲ್ಪಟ್ಟವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿಂದ ಉದ್ಧರಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ. ಅಧ್ಯಾಯವನ್ನು ನೋಡಿ |