Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ಪಟ್ಟಣ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:3
9 ತಿಳಿವುಗಳ ಹೋಲಿಕೆ  

ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.


ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.


ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು