ಯೋನನು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ. ಅಧ್ಯಾಯವನ್ನು ನೋಡಿ |