ಯೋನನು 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು. ಅಧ್ಯಾಯವನ್ನು ನೋಡಿ |