ಯೋಬ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ. ಅಧ್ಯಾಯವನ್ನು ನೋಡಿ |