ಯೋಬ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |