ಯೋಬ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.” ಅಧ್ಯಾಯವನ್ನು ನೋಡಿ |