Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:3
34 ತಿಳಿವುಗಳ ಹೋಲಿಕೆ  

ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.


ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.


ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.


ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.


ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.


ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.


ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.


ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.


ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.


ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.


ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,


ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು, ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.


ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.


ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು