Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲಿಯಾ? ಸರ್ವಶಕ್ತನನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:7
23 ತಿಳಿವುಗಳ ಹೋಲಿಕೆ  

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”


ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!


ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.


ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.


ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?


ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.


ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!


‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು