Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:24
12 ತಿಳಿವುಗಳ ಹೋಲಿಕೆ  

ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.


ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.


ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.


ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.


ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,


ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.


ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.


ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು