Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು ಇವುಗಳಲ್ಲಿ ತಿಳಿಯದಿರುವುದು ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:9
14 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?


ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.


ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ.


ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು.


ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.


ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು