Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬದಾಗಿ ನಿರ್ಣಯವಾಗುವದೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:18
17 ತಿಳಿವುಗಳ ಹೋಲಿಕೆ  

ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.


ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.


ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.


ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು