Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಸುಮ್ಮನಿದ್ದರೆ ಚೆನ್ನ ಮೌನವೇ ನಿಮಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಬಾಯಿಮುಚ್ಚಿಕೊಂಡು ಸುಮ್ಮನಿದ್ದರೆ ಎಷ್ಟೋ ಒಳ್ಳೆಯದು. ನೀವು ಮಾಡಬಹುದಾದ ಜ್ಞಾನದ ಕಾರ್ಯ ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; ಮೌನವೇ ನಿಮಗೆ ಜ್ಞಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:5
14 ತಿಳಿವುಗಳ ಹೋಲಿಕೆ  

ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.


ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


“ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?


“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.


ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?


ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ?


ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ.


ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ,


ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು