Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನೀನು ಕರೆದರೆ ನಾನು ಉತ್ತರಕೊಡುವೆ ನಿನ್ನ ಈ ಸೃಷ್ಟಿಯ ಮೇಲೆ ಹುಟ್ಟೀತು ನಿನಗೆ ಮಮತೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಹಂಬಲಿಕೆ ಹುಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರೇ, ನೀನು ನನ್ನನ್ನು ಕರೆದರೆ, ಉತ್ತರ ಕೊಡುವೆನು. ಆಗ ನಿನ್ನ ಸೃಷ್ಟಿಯಾದ ನನ್ನನ್ನು ನೀನು ಇಷ್ಟಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರೇ, ನೀವು ನನ್ನನ್ನು ಕರೆಯುವಿರಿ, ನಾನು ನಿಮಗೆ ಉತ್ತರಕೊಡುವೆನು; ನಿಮ್ಮ ಈ ಸೃಷ್ಟಿಯ ಮೇಲೆ ನೀವು ಹಂಬಲಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:15
10 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.


ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು