Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀರು ಕಲ್ಲುಗಳನ್ನು ಸವೆಯಿಸುವದು, ಜಲಪ್ರವಾಹಗಳು ಭೂವಿುಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹರಿಯುವ ನೀರು ಕಲ್ಲುಗಳನ್ನು ಸವೆಯಿಸುವಂತೆಯೂ ನೆಲದ ಮೇಲಿನ ಧೂಳನ್ನು ಪ್ರವಾಹದ ನೀರು ಕೊಚ್ಚಿಕೊಂಡು ಹೋಗುವಂತೆಯೂ ದೇವರೇ, ನೀನು ಮನುಷ್ಯನ ನಿರೀಕ್ಷೆಯನ್ನು ನಾಶಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:19
11 ತಿಳಿವುಗಳ ಹೋಲಿಕೆ  

ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,


ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು