Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನ ಮಕ್ಕಳು ಘನತೆಯನ್ನು ಹೊಂದುವದು ಅವನಿಗೆ ತಿಳಿಯುವದಿಲ್ಲ. ಅವರು ಕುಂದಿಹೋಗುವಾಗಲೂ ಅವರ ಸ್ಥಿತಿಯು ಅವನಿಗೆ ಗೋಚರವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:21
10 ತಿಳಿವುಗಳ ಹೋಲಿಕೆ  

ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.


ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”


ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.


ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.


ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು