Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ರೊಟ್ಟಿ ಎಲ್ಲಿ ಎಂದು ಹುಡುಕುತ್ತಾ ಅಲೆದಾಡುವೆನೆಂಬದಾಗಿಯೂ ನಿಶ್ಚಯಿಸಿಕೊಂಡು ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:23
21 ತಿಳಿವುಗಳ ಹೋಲಿಕೆ  

ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.


ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.


ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.


ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.


ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!


ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.


ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.


ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.


ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.


ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.


ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.


ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು