Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಣ್ಣೀರು ಸುರಿಸಿ ನನ್ನ ಮುಖ ಕೆಂಪೇರಿದೆ ನನ್ನ ಕಣ್ಣುಗಳಿಗೆ ಕಾರಿರುಳು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಣ್ಣೀರು ಸುರಿಯುವದರಿಂದ ನನ್ನ ಮುಖವು ಕೆಂಪಾಗಿಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅತ್ತತ್ತು ನನ್ನ ಮುಖವು ಕೆಂಪಾಗಿದೆ, ನನ್ನ ಕಣ್ಣುಗಳ ಸುತ್ತಲೂ ಸುಕ್ಕುಗಟ್ಟಿ ಕಡುಕಪ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಮುಖವು ಅಳುವುದರಿಂದ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ಅಂಧಕಾರವು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:16
14 ತಿಳಿವುಗಳ ಹೋಲಿಕೆ  

ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.


ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.


ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.


ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.


ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.


ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು