Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಭೂವಿುಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ. ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:18
13 ತಿಳಿವುಗಳ ಹೋಲಿಕೆ  

“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.


ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?


ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.


ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು