Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ನ್ಯಾಯವನ್ನು ದೇವರ ಮುಂದೆಯೂ ಮಾನವನ ನ್ಯಾಯವನ್ನು ಅವನ ವಿುತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೇನೇ ಕಣ್ಣೀರು ಸುರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:21
11 ತಿಳಿವುಗಳ ಹೋಲಿಕೆ  

ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.


ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು