Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ನನ್ನನ್ನು ಹಿಡಿದಿರುವದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಕ್ಷೀಣತ್ವವು ನನಗೆ ವಿರುದ್ಧವಾಗಿ ಎದ್ದು ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ, ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ; ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ; ನನ್ನ ಬಿಕ್ಕಟ್ಟೇ ನನಗೆ ವಿರೋಧವಾಗಿ ಎದ್ದು ಸಾಕ್ಷಿ ಕೊಡುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:8
10 ತಿಳಿವುಗಳ ಹೋಲಿಕೆ  

ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.


ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.


ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.


ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.


ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.


ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು