Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ದಿನಗಳು ಮುಗಿದುಹೋದವು. ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮುಗಿದುಹೋದವು ನನ್ನ ದಿನಗಳು ಭಂಗವಾದವು ನನ್ನ ಗುರಿಧ್ಯೇಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ದಿನಗಳು ಮುಗಿದುಹೋದವು, ನನ್ನ ಉದ್ದೇಶಗಳೂ ಮನೋಗತಗಳೂ ಭಂಗವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಜೀವಿತವು ಮುಗಿದುಹೋಗುತ್ತಿದೆ, ನನ್ನ ಯೋಜನೆಗಳು ನಾಶವಾಗಿವೆ; ನನ್ನ ನಿರೀಕ್ಷೆಯು ಇಲ್ಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:11
14 ತಿಳಿವುಗಳ ಹೋಲಿಕೆ  

ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.


ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.


ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.


“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.


ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು