Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:13
13 ತಿಳಿವುಗಳ ಹೋಲಿಕೆ  

ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.


ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.


ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.


ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.


ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.


ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು