Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕುಂದಿಹೋಗುವುದು ಅವನ ಕಿಮ್ಮತ್ತು ಅವನು ಬೀಳುವುದನ್ನೇ ಕಾದಿದೆ ಆಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಬಲವು ಕುಂದಿಹೋಗುವದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನ ಬಲವು ಕುಸಿಯುವುದು; ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:12
10 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.


ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು