Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ರೋಗರುಜಿನಗಳು ಅವನ ಚರ್ಮವನು ಚೂರುಚೂರಾಗಿ ತಿಂದುಬಿಡುವುವು ಅಂಗಾಂಗವಾಗಿ ಮೃತ್ಯುಕಾರಕ ರೋಗವು ಅವನನ್ನು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೃತ್ಯುವಿನ ಹಿರೀಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು ಅವನ ಅಂಗಗಳನ್ನು ನುಂಗಿಬಿಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:13
7 ತಿಳಿವುಗಳ ಹೋಲಿಕೆ  

ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.


ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.


ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?”


ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.


ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು