Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನ ಬುಡವು ಕೆಳಗೆ ಒಣಗುವದು, ಅವನ ರೆಂಬೆಯು ಮೇಲೆ ಬಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನ ಬೇರುಗಳು ಕೆಳಗೆ ಒಣಗಿಹೋಗುತ್ತವೆ. ಅವನ ಕೊಂಬೆಗಳು ಮೇಲೆ ಸತ್ತುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:16
10 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.


ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.


ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,


ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”


(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು