Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನ ಸ್ಮರಣೆಯು ಭೂವಿುಯಲ್ಲಿ ಅಳಿದುಹೋಗುವದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ನಿಲ್ಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:17
13 ತಿಳಿವುಗಳ ಹೋಲಿಕೆ  

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.


“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.


ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ.


ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.


ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.


ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.


ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.


ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.


ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”


ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು