Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:4
13 ತಿಳಿವುಗಳ ಹೋಲಿಕೆ  

ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.


ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.


ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?


ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು