Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಗುಂಡಿಯನ್ನು ಮುಚ್ಚಿದ ತಟ್ಟಿಯ ಮೇಲೆ ನಡೆಯುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:8
18 ತಿಳಿವುಗಳ ಹೋಲಿಕೆ  

ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.


ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.


ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.


ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.


ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.


ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.


ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.


ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.


ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.


ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.


ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು