Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವುದು ಆ ಕಳ್ಳ ಉರುಲು ಅವನನ್ನು ಸಿಕ್ಕಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವದು, ಉರುಲು ಅವನನ್ನು ಹಿಡಿಯುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು. ಉರುಲು ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:9
9 ತಿಳಿವುಗಳ ಹೋಲಿಕೆ  

ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.


ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.


ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು