Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ತಿಂದು ತಿಂದು ನಿಮಗೆ ಸಾಕಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಹಿಂಸಿಸುವಂತೆ ನೀವೂ ನನ್ನನ್ನು ಯಾಕೆ ಹಿಂಸಿಸುತ್ತೀರಿ? ನೀವು ಹಿಂಸೆಪಡಿಸಿದ್ದು ಸಾಕಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ? ನನಗೆ ತೊಂದರೆಪಡಿಸಿದ್ದು ಸಾಲದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:22
14 ತಿಳಿವುಗಳ ಹೋಲಿಕೆ  

ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.


ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?


ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.


ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ?


ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.


ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,


ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.


ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು