Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:13
12 ತಿಳಿವುಗಳ ಹೋಲಿಕೆ  

ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.


ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.


“ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.


ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು