ಯೋಬ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |